ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಮಹಿಳೆ ಅಪರಹಣ ಪ್ರಕರಣದಲ್ಲಿ ಬಂಧಿಸಿದ್ದರು. ಆ ಬಳಿಕ ಜೈಲಿಗೂ ಕಳುಹಿಸಲಾಗಿತ್ತು. ನಿನ್ನೆ ಜಾಮೀನು ಸಿಕ್ಕ ಬೆನ್ನಲ್ಲೇ ಜೈಲಿನಿಂದ ಬಿಡುಗಡೆಯಾಗಿದ್ದರು. ಈಗ ಅವರು ಹಿರಿಯ ವಕೀಲರನ್ನು ಭೇಟಿಯಾಗಿ, ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಮಹಿಳೆ ಅಪಹರಣ ಕೇಸಲ್ಲಿ ಜಾಮೀನಿನ ಬಳಿಕ ನಿನ್ನೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಆ ನಂತ್ರ ಬೆಂಗಳೂರಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಕೂಡ ಟೆಂಪಲ್ ರನ್ ಅನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಮುಂದುವರೆಸಿದ್ದಾರೆ.
ಈ ನಡುವೆ ಬೆಂಗಳೂರಿನ ಬನಶಂಕರಿಯಲ್ಲಿರುವಂತ ಹಿರಿಯ ವಕೀಲರೊಬ್ಬರ ನಿವಾಸಕ್ಕೆ ಭೇಟಿ ನೀಡಿದಂತ ಹೆಚ್.ಡಿ ರೇವಣ್ಣ ಅವರು, ಅವರೊಂದಿಗೆ ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದರು ಎನ್ನಲಾಗಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಮುಂದಿನ ಕಾನೂನು ಹೋರಾಟ ಹೇಗೆ ಮಾಡಬೇಕು.? ಈ ಪ್ರಕರಣದಲ್ಲಿ ಮುಂದಿನ ನಡೆ ಹೇಗೆ ಎನ್ನುವ ಬಗ್ಗೆಯೂ ಚರ್ಚೆ ನಡೆಸಿದರು ಎನ್ನಲಾಗುತ್ತಿದೆ.
ಸುಮಾರು ಅರ್ಧ ಗಂಟೆಯವರೆಗೆ ಬನಶಂಕರಿಯ ಹಿರಿಯ ವಕೀಲರ ನಿವಾಸದಲ್ಲಿ ಚರ್ಚೆ ನಡೆಸಿದಂತ ಹೆಚ್.ಡಿ ರೇವಣ್ಣ ಅಲ್ಲಿಂದ ಮತ್ತೆ ದೇವಸ್ಥಾನಗಳಿಗೆ ಭೇಟಿಯನ್ನು ಮಾಡೋದಕ್ಕಾಗಿ ತೆರಳಿದರು.
BREAKING : ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ!
BREAKING : ಗುಂಡು ಹಾರಿಸಿಕೊಂಡು `ಸಚಿನ್ ತೆಂಡೂಲ್ಕರ್’ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ’ ಆತ್ಮಹತ್ಯೆ