ಬೆಂಗಳೂರು: ಉತ್ತಮ ಶಾಲೆಗಳಿಗೆ ಸೇರಿಸಬೇಕು ಎಂಬುದು ಅನೇಕ ಮಕ್ಕಳ ಪೋಷಕರ ಆಸೆ. ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಆರ್ ಟಿಇ. ಈಗ ಆರ್ ಟಿ ಇ ಅಡಿಯಲ್ಲಿ ಅರ್ಜಿ ಸಲ್ಲಿಕೆಗೆ ಅವದಿಯನ್ನು ಮೇ.20ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.22ರವರೆಗೆ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದನ್ನು ಪೋಷಕರ ಕೋರಿಕೆ, ಮನವಿಯ ಮೇರೆಗೆ ಮೇ.20ರವರಗೆ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.
ಮೇ 30ರ ವರೆಗೆ ವಿಶೇಷ ಪ್ರವರ್ಗಗಳು ಮತ್ತು ಕ್ರಮಬದ್ದತೆ ಕುರಿತ ಅರ್ಜಿಗಳ ಪರಿಶೀಲನೆ ನಡೆಸಲಿದ್ದು, ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಜೂನ್ 1 ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಜೂನ್ 5 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಜೂನ್ 6 ರಿಂದ ಶಾಲೆಗಳಲ್ಲಿ ಆರ್ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಳ್ಳಲಿದೆ.
ಜೂನ್ 6 ರಿಂದ 14ರ ವರೆಗೆ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಿದ್ದು, ಜೂನ್ 19 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಜೂನ್ 20 ರಿಂದ 27 ರ ವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಜೂನ್ 28ರ ವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತದೆ.
ಫೆಡರೇಶನ್ ಕಪ್ 2024: ಭಾರತದ ನೀರಜ್ ಚೋಪ್ರಾಗೆ ‘ಜಾವೆಲಿನ್’ನಲ್ಲಿ ಚಿನ್ನದ ಪದಕ | Neeraj Chopra Win Gold
ರಾಜ್ಯದಲ್ಲೊಂದು ‘ದೇವರ ಪವಾಡ’: 10 ವರ್ಷಗಳ ಹಿಂದಿನ ‘ಮಾರಮ್ಮನ ಕಲ್ಲು’ ಹುಡುಕಿಕೊಟ್ಟ ‘ಅಕ್ಕನಾಗಮ್ಮ’