ಧಾರವಾಡ : ಅಂಗವಿಕಲ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀ ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ, ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ.10 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ, 6ನೇ ತರಗತಿಗೆ ಪ್ರವೇಶ ಕಲ್ಪಿಸುವ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.