ಬೆಂಗಳೂರು : ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಂಜುನಾಥ್ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮೃತ ಮಹಿಳೆಯನ್ನು ಸಂಧ್ಯಾ ಎಂದು ಗುರುತಿಸಲಾಗಿದೆ.
ಐದು ವರ್ಷದ ಹಿಂದೆ ಇಂಜಿನಿಯರ್ ಜಯಪ್ರಕಾಶ್ ಎಂಬುವರ ಜೊತೆಗೆ ಸಂಧ್ಯಾ ಮದುವೆಯಾಗಿತ್ತು. ಗಂಡನ ಮನೆಯವರೇ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.