ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿ ಮಂಗಳವಾರ ಬಿಡುಗಡೆಯಾಗಿದ್ದ ಮಾಜಿ ಸಚಿವ ರೇವಣ್ಣಗೆ ಇದೀಗ ಬಂಧನದ ಭೀತಿ ಎದುರಾಗಿದೆ.
ಹೌದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗದಿದ್ದರೆ ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಹಿಳೆ ಅಪಹರಣದ ಆರೋಪ ಸಂಬಂಧ ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ ಐಟಿ ರೇವಣ್ಣರನ್ನು ಬಂಧಿಸಿದ್ದರು. ಮಂಗಳವಾರ ಕೋರ್ಟ್ ನಿಂದ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿರುವ ರೇವಣ್ಣಗೆ ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಜೈಲು ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎ.೧ ಆರೋಪಿಯಾಗಿರುವ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಬೆಂಗಳೂರಿನ 43 ನೇ ಎಸಿಎಮ್ ಎಮ್ ಕೋರ್ಟ್ ನಲ್ಲಿ ನಡೆಯಲಿದೆ.
ನಿನ್ನೆ ಒಂದು ದಿನದ ಮಟ್ಟಿಗೆ ರೇವಣ್ಣಗೆ ಜಾಮೀನು ನೀಡಲಾಗಿತ್ತು.