ಹುಬ್ಬಳ್ಳಿ : ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಯುವತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ಆರೋಪಿ ಆಟೋ ಚಾಲಕ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ (21)ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಗೀಶ್ ಪರಾರಿಯಾಗಿದ್ದ.
ಈತನ ಚಲವಲನ ಹುಬ್ಬಳ್ಳಿ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಜಾಡು ಹಿಡಿದು ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ರೈಲಿನಲ್ಲಿ ಕರೆದುಕೊಂಡು ಬರುವಾಗ ಬಿದ್ದು ಗಾಯಗೊಂಡಿದ್ದಾನೆ. ಸದ್ಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಂಜೆಯೇ ಕೋರ್ಟ್ ಹಾಜರುಪಡಿಸಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.