ಬೆಂಗಳೂರು : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಯೊಬ್ಬಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಅರಸೀಕರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ ಎಂದು ಗುರುತಿಸಲಾಗಿದೆ. ಹರ್ಷಿತಾ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.