ಹಾಸನ : ಇತ್ತೀಚಿಗೆ ನಾಗರೀಕ ಸಮಾಜದಲ್ಲಿ ಯಾವುದೇ ಸಂಬಂಧಗಳಿಗೆ ಬೆಲೆನೇ ಇಲ್ಲದಂತಾಗಿದೆ.ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ.
ಹೌದು ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಮಗಳ ಮೇಲೆ ಸ್ವಂತ ತಂದೆಯೇ ಅತ್ಯಾಚಾರ ಎಸಗಿದ್ದಾನೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ ಎಂದು ಹೇಳಲಾಗುತ್ತಿದೆ.
ಬಾಲಕಿ ಪಾಪಿ ತಂದೆ ಮಾಡಿದಂತ ಕೃತ್ಯವನ್ನು ತನ್ನ ಸಹೋದರಿಗೆ ಹೇಳಿದ ನಂತರ ವಿಷಯ ಬೆಳಕಿಗೆ ಬಂದಿದ್ದು, ಬಾಲಕಿಯ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳಾಧಿಕಾರಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.