ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿರುತ್ತವೆ.
ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.
ಬೆಂಗಳೂರು ನಗರದ ಸಾರ್ವಜನಿಕರುಗಳು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಕೋರಿದೆ.
ಉಚಿತವಾಗಿ ಸಸಿಗಳ ವಿತರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕ ವತಿಯಿಂದ ಪರಿಸರ ಕಾಳಜಿ ಉತ್ತೇಜಿಸಲು ಉಚಿತವಾಗಿ ಸಸಿಗಳನ್ನು ಸಾರ್ವಜನಿಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ವಿತರಿಸುತ್ತಿದ್ದು, ಈ ಕೆಳಕಂಡ ಸಸಸ್ಯಕ್ಷೇತ್ರಗಳನ್ನು ಸಂಪರ್ಕಿಸಿ, ಅರ್ಜಿ ನೀಡಿ ಗಿಡಗಳನ್ನು ಪಡೆಯಬಹುದಾಗಿರುತ್ತದೆ ಎಂದು ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಎಲ್.ಜಿ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.
ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿ.ಕೆ. ಶಿವಕುಮಾರ್
BREAKING: ರಾಜ್ಯದಲ್ಲಿ ಮತ್ತೊಂದು ‘ಈಜು ದುರಂತ’: ರಾಮನಗರದಲ್ಲಿ ‘ಮೂವರು ಮಕ್ಕಳು ನೀರುಪಾಲು’