ಬೆಂಗಳೂರು : ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.
ಇದೀಗ 6 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸುನಿಲ್ ಕುಮಾರ್ ಉಸ್ತುವಾರಿಯನ್ನಾಗಿ ಹಾಗೂ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಸಹ ಉಸ್ತುವಾರಿಯನ್ನಾಗಿ ನೇಮಿಸಿದೆ.
ಅದೇ ರೀತಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ ಅವರನ್ನು ಬಿಜೆಪಿ ನೇಮಕ ಮಾಡಿದೆ.
ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ನ ಭೋಜೇಗೌಡ ಸ್ಪರ್ಧಿಸಲಿದ್ದಾರೆ.