ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಸುವಂತ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ, ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತಿದೆ ಎಂದಿದೆ.
ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಅರ್ಹ ಡಿಪ್ಲೋಮಾ ಅಭ್ಯರ್ಥಿಗಳು 20-05-2024ರ ಬೆಳಿಗ್ಗೆ 11 ಗಂಟೆಯಿಂದ 23-05-2024ರ ರಾತ್ರಿ 11.59ರವರೆಗೆ ನೋಂದಣಿ ಮಾಡಿ, ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಿ, 24-05-2024ರೊಳೆಗೆ ಶುಲ್ಕವನ್ನು ಪಾವತಿಸುವಂತೆ ತಿಳಿಸಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಿ, ಪಡೆಯುವಂತೆ ತಿಳಿಸಿದೆ.