ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿನಿಯರಿಗೆ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಡಿಪ್ಲೊಮಾ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಮೇ 21 ಕೊನೆಯ ದಿನಾಂಕವಾಗಿದೆ.
ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಸಂಸ್ಥೆಗೆ ಕೂಡಲೇ ಭೇಟಿ ನೀಡಿ ಪ್ರವೇಶ ಪಡೆಯಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶೀಲಾ ಕೆ. ವಿಭಾಗಾಧಿಕಾರಿಗಳು, ಕಾಮಗಾರಿ ವಿಭಾಗ – 94491 60723, ಭಾಸ್ಕರ್ ಎಂ. ವಿಭಾಗಾಧಿಕಾರಿಗಳು, ಜಿಪಿಎ ವಿಭಾಗ – 99029 00144, ಅನಿತ ಬಿ.ಜಿ. ರಿಜಿಸ್ಟ್ರಾರ್ 99456 04569 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.