ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು.
ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಜಯಶಾಲೆಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು.
ಈ ಬಳಿಕ ಮಾತನಾಡಿದಂತ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಒಳಿತಿಗಾಗಿ ಸದಾ ಚಿಂತಿಸತ್ತದೆ. ನೀವು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಕೆ ಮಂಜುನಾಥ್ ಕುಮಾರ್ ಅವರಿಗೆ ಮತನೀಡಿ ಗೆಲ್ಲಿಸಿ ಕೊಡಬೇಕೆಂದು ಹೇಳಿದರು.
ನಿಮ್ಮ ಬೆಂಬಲದಿಂದ ಈಗಾಗಲೇ ಇವರು ಗೆದಿದ್ದಾರೆಂದು ನನಗೆ ಅನಿಸುತ್ತಿದೆ. ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಡಾ.ಕೆ.ಕೆ ಮಂಜುನಾಥ್ ಗೆಲುವು ಖಚಿತ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಶಾಸಕರಾದಂತ ತಮ್ಮಯ್ಯ, ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಜರಿದ್ದರು.
ಮತ್ತೊಂದೆಡೆ ಚಿಕ್ಕಮಗಳೂರಿನ ಎಂ.ಎಲ್ ವಾಸುದೇವ ಮೂರ್ತಿ ರೋಟರಿ ಹಾಲ್ ನಲ್ಲಿ “ವಿಧಾನ ಪರಿಷತ್ ಚುನಾವಣಾ ತಯಾರಿ” ಕುರಿತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಸಭೆ ನಡೆಸಿ, ತಮ್ಮನ್ನು ಗೆಲ್ಲಿಸುವಂತೆ ಶಿಕ್ಷಕರನ್ನು ಕೋರಿದರು.
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಭಾರತದಲ್ಲಿ ನಾಲ್ವರಲ್ಲಿ ಒಬ್ಬರ ಮೇಲೆ ಸೈಬರ್ ದಾಳಿ: ಆತಂಕ ಮೂಡಿಸಿದ ವರದಿ