ನವದೆಹಲಿ : ಮುಂಬೈ ಇಂಡಿಯನ್ಸ್ ತಂಡದ ಸೋಲಿನ ನಿರಾಸೆ ಮಧ್ಯ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಮತ್ತೊಂದು ಬಿಗ್ ಶಾಕ್ ನೀಡಿದೆ. ತಂಡಗಳು ಮುಂದಿನ ಋತುವಿನ ಬಗ್ಗೆ ಯೋಚಿಸಲು ಪ್ರಾರಂಭಿಸುವ ಮೊದಲೇ ಆಲ್ರೌಂಡರ್ ಹಿನ್ನಡೆ ಅನುಭವಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ವರ್ಷದ ಕೊನೆಯ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ನಿಷೇಧಕ್ಕೊಳಗಾಗಿರುವ ಹಾರ್ದಿಕ್ ಮುಂದಿನ ಋತುವಿನ ಮೊದಲ ಪಂದ್ಯವನ್ನ ಆಡಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಶುಕ್ರವಾರ ತಡರಾತ್ರಿ ಘೋಷಿಸಿದೆ.
“ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ 17 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ತಿಳಿಸಿದೆ.
ಲೋಕಸಭಾ ಚುನಾವಣೆ 2024: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್ ಸಿಂಗ್, ಜೋಶಿ | ಫೋಟೋ ನೋಡಿ