ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಸಿಎಸ್ ಬರೆದಿರುವಂತ ಪತ್ರದಲ್ಲಿ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸುವ ಬಗ್ಗೆ ಸಕ್ಷಮ ಪ್ರಾಧಿಕಾರಗಳು ಚುನಾವಣಾ ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು, ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.
BREAKING: ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ | Karnataka SSLC Exam-2 Timetable
BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ