ಕಲಬುರಗಿ : ವೇಗವಾಗಿ ಬಂದಂತಹ ಟಿಪ್ಪರ್ ಹಿಂದಿನಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೋ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿರುವಾಗ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲ್ಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ನಡೆದಿದೆ.
ಹೌದು ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ದೇವಾನಂದ ಘತ್ತರಗಿ (25) ಬಸವರಾಜ ದುರ್ಗಾ (56) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಮೃತರು ಆಫ್ಜಲಪುರ ತಾಲೂಕಿನ ಹೊಸೂರು ಗ್ರಾಮದವರು ಎಂದು ಹೇಳಲಾಗುತ್ತಿದೆ.ಅಪಘಾತದ ನಂತರ ಟಿಪ್ಪರ್ ಸ್ಥಳದಲ್ಲಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಆಫ್ಜಲ್ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಘಟನೆ ಕುರಿತಂತೆ ಆಫ್ಜಲ್ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.