ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್ ಅಶೋಕ್ ಪ್ರಕರಣದ ಕುರಿತಂತೆ ಸಿವಿಐತನಿಕೆ ಆದರೆ ಸರ್ಕಾರದವರು ಒಳಗೆ ಹೋಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಆದರೆ ಪೆನ್ ಡ್ರೈವ್ ಹಂಚಿದ ಅವರ ಬಗ್ಗೆಯೂ ತನಿಖೆಯಾಗಲಿ. ನ್ಯಾಯಾಂಗ ತನಿಖೆ ಆದರೆ ಮಾತ್ರ ಸತ್ಯ ಹೊರಬರುತ್ತದೆ ಇಲ್ಲದಿದ್ದರೆ ಸತ್ಯ ಮುಚ್ಚಿ ಹಾಕುವ ಕೆಲಸ ಆಗುತ್ತದೆ ಎಂದರು.
ಬೆಂಕಿ ಇಲ್ಲದೆ ಹೊಗೆ ಆಡಲ್ಲ. ಮೋದಿಗೆ ಕೆಟ್ಟ ಹೆಸರು ತರಲು ಮಾಡಿರುವ ಪ್ಲಾನ್ ಆಗಿದೆ. ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್ ಪಕ್ಷ ಹೊರಟಿದೆ. ದೇವರಾಜೇಗೌಡ ಹೇಳಿರುವುದು ನೂರಕ್ಕೆ ನೂರು ಸತ್ಯ. ಪೆನ್ ಡ್ರೈವ್ ಕೇಸ್ ತನಿಖೆಗೆ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಗೃಹ ಸಚಿವರ ಅನತಿಯಂತೆ ಏನೋ ನಡೆಯುತ್ತಿಲ್ಲ. ಹುಬ್ಬಳ್ಳಿಯಲ್ಲಿ ನೇಹ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.ಕಾಂಗ್ರೆಸ್ ಬಂದರೆ ಕೊಲೆಗಡುಕರಿಗೆ ಹಬ್ಬ. ಈ ರಾಜ್ಯ ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಭಯೋತ್ಪಾದಕರು ಕೊಲೆಗಡುಕರಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.