ಬೆಂಗಳೂರು: ದಿನೇ ದಿನೇ ಕರ್ನಾಟಕ ಕ್ರೈಂ ರಾಜ್ಯವಾಗುತ್ತಿದೆ. ಗೃಹ ಸಚಿವರ ಆಣತಿಯಂತೆ ಏನೂ ನಡೆಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾದ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಮಾಸೋ ಮುನ್ನವೇವ ಮತ್ತೊಂದು ಹತ್ಯೆ ಆಗಿದೆ. ಕಾಂಗ್ರೆಸ್ ಬಂದ್ರೆ ಕೊಲೆಗಡುಕರಿಗೆ ಹಬ್ಬ. ಈ ರಾಜ್ಯ ಸರ್ಕಾರವನ್ನೇ ಗಲ್ಲಿಗೇರಿಸಬೇಕು ಎಂದರು.
ಭಯೋತ್ಪಾದಕರು, ಕೊಲೆಗಡುಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಾಗಿ ರಾಜ್ಯ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದರು.
ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಿ. ನಮ್ಮ ಅಭ್ಯಂತರವೇನು ಇಲ್ಲ. ಆದ್ರೇ ಪೆನ್ ಡ್ರೈವ್ ಹಂಚಿದವರ ಬಗ್ಗೆಯೂ ತನಿಖೆ ಆಗಬೇಕು. ಎಸ್ಐಟಿ ಅಧಿಕಾರಿಗಳ ತನಿಖೆಯಲ್ಲಿ ಸತ್ಯ ಹೊರ ಬರೋದು ಡೌಟ್. ನ್ಯಾಯಾಂಗ ತನಿಖೆ ಆದ್ರೆ ಮಾತ್ರ ಸತ್ಯ ಹೊರಬರುತ್ತದೆ. ಇಲ್ಲದಿದ್ದರೇ ಸತ್ಯ ಮುಚ್ಚಿ ಹಾಕೋ ಕೆಲಸ ಆಗುತ್ತದೆ ಎಂಬುದಾಗಿ ಹೇಳಿದರು.
ಅಶ್ಲೀಲ ವೀಡಿಯೋ ಕೇಸ್: ಪ್ರಜ್ವಲ್ ರೇವಣ್ಣ ವಿರುದ್ಧ ‘ಅರೆಸ್ಟ್ ವಾರೆಂಟ್’ ಪಡೆದ್ರೆ ಬಂದಿಸಬಹುದಾ.?
BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ