ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಸ್ಪರ್ಧಿಸಿದ್ದಾರೆ. ಅವರಿಗೆ ಅತ್ಯಮೂಲ್ಯ ಮತವನ್ನು ನೀಡಿ ಗೆಲ್ಲಿಸುವಂತೆ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನೆಡೆಯುವ ವಿಧಾನ ಪರಿಷತ್ ಚುನಾವಣೆಯ “ಪೂರ್ವಭಾವಿ ಸಭೆ”ಯನ್ನುದ್ದೇಶಿಸಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿದರು.
ಜೂನ್ 3 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ತಮ್ಮ ಅಮೂಲ್ಯ ಮತವನ್ನು ನೀಡುವ ಮೂಲಕ ವಿಧಾನಪರಿಷತ್ ಗೆ ಆಯ್ಕೆ ಮಾಡುವುದರ ಜೊತೆಗೆ ತಮ್ಮ ಸಂಬಂಧಿಕರು, ಸ್ನೇಹಿತರಿಂದಲೂ ಮತ ಕೊಡಿಸಿ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಜಿಲ್ಲಾಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಎಂಎಡಿಬಿ ಅಧ್ಯಕ್ಷರಾದ ಆರ್.ಎಂ ಮಂಜುನಾಥಗೌಡ್ರು, ಸೂಡಾ ಅಧ್ಯಕ್ಷರಾದ ಹೆಚ್.ಎಸ್ ಸುಂದರೇಶ್, ಭೋವಿ ನಿಗಮದ ಅಧ್ಯಕ್ಷರಾದ ರವಿ ಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ ಪಲ್ಲವಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಈ ‘ರಾಜ್ಯ ಸರ್ಕಾರ’ವನ್ನೇ ಗಲ್ಲಿಗೇರಿಸಬೇಕು: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ
BREAKING : ವಿಜಯಪುರದಲ್ಲಿ ಯುವಕನ ಭೀಕರ ಹತ್ಯೆ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ