ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಕಾನೂನು ಹಾಗೂ ಸೂರ್ಯವಯಸ್ತೆಯ ವಿಭಾಗದ ಎಡಿಜಿಪಿ ಆಗಿರುವಂತಹ ಆರ್ ಹಿತೇಂದ್ರ ಅವರು ಮೃತ ಅಂಜಲಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೆ ವೇಳೆ ಆರ್ ಹಿತೇಂದ್ರ ಅವರೊಂದಿಗೆ ಮಾತನಾಡಿದ ಅಂಜಲಿ ಪೋಷಕರು, ನಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅವರ ಕಾಲಿಗೆ ಬಿದ್ದ ಘಟನೆ ನಡೆಯಿತು. ಇವಳೆ ಅಂಜಲಿಯ ಅಜ್ಜಿ ಮಾತನಾಡಿ, ಆರೋಪಿ ವಿಶ್ವನನ್ನು ಗಲ್ಲಿಗೇರಿಸಿ ಇಲ್ಲವೇ ಎನ್ ಕೌಂಟರ್ ಮಾಡಿ, ನಮಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿ ಕೊಡಿ ಎಂದು ಮನವಿ ಮಾಡಿದರು.
ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಎಡಿಜಿಪಿ ಆರ್ಯ ಕೇಂದ್ರ ಅವರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಕ್ರಮ ಚಟುವಟಿಕೆ ಹಾಗೂ ಅಪರಾಧ ಕೃತ್ಯಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಅದರಲ್ಲೂ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ್ ಕೊರೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.ನಂತರ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.