ಬೆಂಗಳೂರು: ಹಾಸನ ಪೆನ್ ಡ್ರೈವ್ ವೈರಲ್ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಸಿಡಿದೆದ್ದಿದೆ. ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಪಿತೂರಿ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದೆ.
ಇಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಪರಿಷತ್ ಸದಸ್ಯ ಹಾಗೂ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ಅವರು, ಜೆಡಿಎಸ್ ಪಕ್ಷವು, ರಾಜ್ಯ ಕಾಂಗ್ರೆಸ್ ದುರಾಡಳಿತ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿತೂರಿ ಹಾಗೂ ಕುಮ್ಮಕ್ಕಿನಿಂದ ಎಲ್ ಆರ್ ಶಿವರಾಮೇಗೌಡ ರವರು ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ರವರ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ಡಿಕೆ ಶಿವಕುಮಾರ್ ಮತ್ತು ಎಲ್ ಆರ್ ಶಿವರಾಮೇಗೌಡ ರವರ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ 20.05.2024 ಸೋಮವಾರ ಬೆಳಗ್ಗೆ 11:00 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಆದ್ದರಿಂದ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು, ವಾರ್ಡ್ ಅಧ್ಯಕ್ಷರುಗಳು, ಹಾಗೂ ಕಾರ್ಯಕರ್ತರು ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಿದ್ದಾರೆ.
Watch Video: ‘ಪೊಲೀಸ್ ಠಾಣೆ’ ಏನು ನಿಮ್ಮಪ್ಪಂದಾ.?: ‘PSI’ಗೆ ‘BJP ಶಾಸಕ ಹರೀಶ್ ಪೂಂಜಾ’ ಧಮ್ಕಿ
ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: JDS ಗಂಭೀರ ಆರೋಪ