ನವದೆಹಲಿ: ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಯುವಕನೊಬ್ಬ ಭಾರತೀಯ ಜನತಾ ಪಕ್ಷಕ್ಕೆ ಎಂಟು ಬಾರಿ ಮತ ಚಲಾಯಿಸಿದ್ದಾನೆ ಎಂದು ಹೇಳಲಾದ ವೀಡಿಯೊ ವೈರಲ್ ಆದ ನಂತರ ಪ್ರತಿಪಕ್ಷಗಳು ಭಾನುವಾರ ಚುನಾವಣಾ ಆಯೋಗಕ್ಕೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಅಂಥ ಮನವಿ ಮಾಡಿಕೊಂಡಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ವ್ಯಕ್ತಿಯು ಹಲವಾರು ಬಾರಿ ಮತ ಚಲಾಯಿಸುವಾಗ ತನ್ನನ್ನು ರೆಕಾರ್ಡ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.
ಉತ್ತರ ಪ್ರದೇಶದ ಇಟಾ ಜಿಲ್ಲೆಯ ಖಿರಿ ಪಮಾರನ್ ಗ್ರಾಮದಲ್ಲಿ ಈ ವಿಡಿಯೋ ನಡೆದಿದೆ. ಈ ಗ್ರಾಮವು ಅಲಿಗಂಜ್ ವಿಧಾನಸಭಾ ಕ್ಷೇತ್ರದ ಭಾಗವಾಗಿದ್ದು, ಇದು ಫರೂಕಾಬಾದ್ ಸಂಸದೀಯ ಕ್ಷೇತ್ರದ ಅಡಿಯಲ್ಲಿ ಬರುತ್ತದೆ. ಹಾಲಿ ಸಂಸದ ಮುಖೇಶ್ ರಜಪೂತ್ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಮೇ 13 ರಂದು ನಾಲ್ಕನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಫರೂಕಾಬಾದ್ ಕ್ಷೇತ್ರದಲ್ಲಿ ಮತದಾನ ನಡೆಯಿತು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ:
अगर चुनाव आयोग को लगे कि ये गलत हुआ है तो वो कुछ कार्रवाई ज़रूर करे, नहीं तो…
भाजपा की बूथ कमेटी, दरअसल लूट कमेटी है। #नहीं_चाहिए_भाजपा pic.twitter.com/8gwJ4wHAdw
— Akhilesh Yadav (@yadavakhilesh) May 19, 2024