ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದೇಶದ ವಿದೇಶಾಂಗ ಸಚಿವರು ಮತ್ತು ಇತರ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಹಿಂದಿನ ದಿನ ಇರಾನ್ನ ಪರ್ವತ ವಾಯುವ್ಯ ಪ್ರದೇಶಗಳಲ್ಲಿ ಅಪಘಾತಕ್ಕೀಡಾಗಿದ್ದು, ಹೆಲಿಕಾಫ್ಟರ್‌ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸೋಮವಾರ ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಣಾ ಸಿಬ್ಬಂದಿ ಹೆಲಿಕಾಪ್ಟರ್ ಅನ್ನು ಸುಮಾರು 2 ಕಿಲೋಮೀಟರ್ ದೂರದಿಂದ ನೋಡಿದ್ದಾರೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಯ ಮುಖ್ಯಸ್ಥ ಪಿರ್ ಹುಸೇನ್ ಕೊಲಿವಾಂಡ್ ರಾಜ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ನಡುವೆ ಮಾನವ ರಹಿತ ವಿಮಾನವೊಂದು ಹೆಲಿಕಾಪ್ಟರ್ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Akinci UAV identifies source of heat suspected to be wreckage of helicopter carrying Iranian President Raisi and shares its coordinates with Iranian authorities pic.twitter.com/0tZtMc5oaP
— Anadolu English (@anadoluagency) May 20, 2024