ನವದೆಹಲಿ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇರಾನ್ ಅಧ್ಯಕ್ಷರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷ ಡಾ.ಸಯ್ಯದ್ ಇಬ್ರಾಹಿಂ ರೈಸಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಮತ್ತು ಆಘಾತಕ್ಕೊಳಗಾಗಿದ್ದೇನೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ಅವರ ಕುಟುಂಬಕ್ಕೆ ಮತ್ತು ಇರಾನ್ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ದುಃಖದ ಸಮಯದಲ್ಲಿ ಭಾರತವು ಇರಾನ್ನೊಂದಿಗೆ ನಿಲ್ಲುತ್ತದೆ.
Deeply saddened and shocked by the tragic demise of Dr. Seyed Ebrahim Raisi, President of the Islamic Republic of Iran. His contribution to strengthening India-Iran bilateral relationship will always be remembered. My heartfelt condolences to his family and the people of Iran.…
— Narendra Modi (@narendramodi) May 20, 2024