ಬೆಂಗಳೂರು : ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದು, ಈ ನಡುವೆ ಈ ವರ್ಷದ ಆರಂಭದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದೆ.
ಹೌದು, ಕಲೆದ ವರ್ಷದ ಆರಂಭದಲ್ಲಿ ಕೋಡಿಮಠದ ಶ್ರೀಗಳು ವರ್ಷದ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳ ಸಾವಾಗುವ ಲಕ್ಷಣ ಕಾಣುತ್ತಿದೆ. ಜೊತೆಗೆ ಜತ್ತಿನ ದೊಡ್ಡ ಸಂತರ ಕೊಲೆಯಾಗುತ್ತದೆ ಎಂದು ಭವಿಷ್ಯ ನುಡಿದಿದ್ದರು. ಈ ಭವಿಷ್ಯ ನಿಜವಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ದುರಂತದಲಿ ಸಾವನ್ನಪ್ಪಿದ್ದಾರೆ. ಇವರ ಜೊತೆಗೆ ಇರಾನ್ ವಿದೇಶಾಂಗ ಸಚಿವ ಉಸೇನ್ ಅಮಿತ್ ಅಬ್ದುಲ್ಲಾಹಿಯಾನ್ ಕೂಡ ಮೃತಪಟ್ಟಿದ್ದಾರೆ.