ಬೆಂಗಳೂರು : ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಇದು ಬಿಜೆಪಿಯವರ ಸೃಷ್ಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಇರುವುದರಿಂದ ವರ್ಷದ ಸಂಭಭ್ರಮಾಚಾರಣೆಯನ್ನು ಮಾಡುವುದಕ್ಕೆ ಆಗಲಿಲ್ಲ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ ಎಂದರು.
ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ಪಡಿಸಿದ್ದಾರೆ. ಖಾಜನೆ ಆಗುತ್ತೆ, ಪಾಪರ್ ಆಗಿದೆ ಏಂದು ಹೇಳುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾದ ಮಾತು. ಐದು ಗ್ಯಾರಂಟಿ ಯೋಜನೆಗಳಿಗೆ 36 ಸಾವಿರ ಕೋಟಿ ರೂ, ಖರ್ಚಾಗಿದೆ ಎಂದು ತಿಳಿಸಿದ್ದಾರೆ.