ಬೆಂಗಳೂರು : ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು, ಕೊಲೆ, ದರೋಡೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚು ತಲೆ ಇವೆ. ಇದೀಗ ಕಾಮುಕನೊಬ್ಬ 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಸಿಲಿಕಾನ್ ಸಿಟಿಯಲ್ಲಿ ಕಾಮುಕನೋರ್ವ ಅಟ್ಟಹಾಸ ಮೆರೆದಿದ್ದಾನೆ. ಏನೂ ಅರಿಯದ 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ ಈ ಪೈಶಾಚಿಕ ಕೃತ್ಯ ಎಸಗಿದ್ದು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ಬಂಧಿತ ಆರೋಪಿ ರಾಜೇಶ್ ಮೂಲತಹ ಬಿಹಾರದವನು ಬೆಂಗಳೂರಿನ ನಾಗೇನಹಳ್ಳಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದನು. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆರೋಪಿ ರಾಜೇಶ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಹೆಬ್ಬಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ ಎಂದು ತಿಳಿದುಬಂದಿದೆ.