ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷ-2 ಅನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಣೆ ಮಾಡಲಾಗಿದೆ.
- ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ದಿನಾಂಕ 21-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.
- ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ದಿನಾಂಕ 24-05-2024ರವರೆಗೆ ಕೊನೆ ದಿನವಾಗಿದೆ.
- ಕ್ರಮ ಸಂಖ್ಯೆ-2ರಂತೆ ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಗೆ ಶುಲ್ಕವನ್ನು ಜಮೆ ಮಾಡಲು ದಿನಾಂಕ 27-05-2024 ಕೊನೆಯ ದಿನವಾಗಿದೆ.
- 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳು ( NSR & NSPR) ಪರೀಕ್ಷಾ ಶುಲ್ಕವನ್ನು ಹಳೆಯ ಪದ್ಧತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ ಅಂತಿಮ ದಿನಾಂಕ 27-05-2024 ಆಗಿದೆ.
ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ : ʻಬಿತ್ತನೆ ಬೀಜʼಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ
BREAKING : ʻಹೊಸ ಕ್ರಿಮಿನಲ್ ಕಾನೂನುʼಗಳ ವಿರುದ್ಧದ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್