ಬೆಂಗಳೂರು : ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿಆರ್ ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧಾರದ ಮೇಲೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ ಪಾರ್ಟಿ ಪ್ರಕರಣ ಪ್ರಕರಣ ಸಂಬಂಧ ಇವರಿಗೆ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಕೆ ಎಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪಾರ್ಟಿಗೆ ತಂದಿದ್ದ 15.56 ಗ್ರಾಂ ಎಂಡಿಎಂಎ, 6.2 ಗ್ರಾಂ ಕೊಕೆನ್ 6 ಗ್ರಾಂ ಹೈಡೋ ಗಾಂಜಾ, 5 ಮೊಬೈಲ್ ಹಾಗೂ ಎರಡು ವಾಹನಗಳನ್ನು ಮಾಡಿದ್ದಾರೆ. ಸನ್ ಸೆಟ್ ಟು ಸಣ್ಣರೈಸ್ ವಿಕ್ಟರಿ ಎಂದು ಪಾರ್ಟಿ ಆಯೋಜನೆ ಮಾಡಲಾಗಿತ್ತು.ಮಾದಕ ವಸ್ತು ಬಳಕೆ ಮಾಹಿತಿ ತಿಳಿದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.