ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧಿಸಿದಂತೆ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿಯ ವೀರಾಪುರ ಕಾಲೋಜಿನಿಯಲ್ಲಿರುವಂತ ಮೃತ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿಯಾಗಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ, ತನ್ನ ಮಗಳನ್ನು ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿಸಿದರು.
BREAKING: ಹಾಸನ ಪೆನ್ ಡ್ರೈವ್ ವೈರಲ್ ಕೇಸ್: ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ, ಜೈಲುಪಾಲು
BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ