ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ SSLC ಪರೀಕ್ಷೆಗೆ ಗ್ರೇಸ್ ಮಾಸ್ ನೀಡದಿರಲು ನಿರ್ಧರಿಸಿದ್ದು, ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯ ಎರಡನೇ ಹಾಗೂ ಮೂರನೇ ಪೂರಕ ಪರೀಕ್ಷೆಗೂ ಕೂಡ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಸ್ ಮಾರ್ಕ್ ನೀಡಿರುವುದು ಈ ವರ್ಷಕ್ಕೆ ಮಾತ್ರ. ನಾವೀಗ ಎಲ್ಲಿದ್ದೇವೆ ಅನ್ನೋದು ಅರಿವಿಗೆ ಬಂದಿದೆ.ಹಾಗಾಗಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. ಉಡುಪಿ ದಕ್ಷಿಣ ಕನ್ನಡ ಯಾವತ್ತೂ ಟಾಪರ್ಸ್ ಆಗಿ ಇರುತ್ತಿದ್ದರು. ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದೆ ಎಂದರು.
ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ.ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.