ಬೆಂಗಳೂರು: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಸೋ ಮುನ್ನವೇ ನೇಹಾ ಹಿರೇಮಠ್ ಬರ್ಬರವಾಗಿ ಹತ್ಯೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆ ಬೆಚ್ಚಿ ಬಿದ್ದಿದ್ದರು. ಈ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಹುಬ್ಬಳ್ಳಿ-ಧಾರವಾಡ ನೂತನ ಡೆಪ್ಯೂಟಿ ಕಮೀಷನರ್ ಆಫ್ ಪೊಲೀಸ್ ಆಗಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕ ಕುಶಾಲ್ ಚೌಕ್ಸೆ (ಕೆಎನ್-2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಶಾಲಾ ಶಿಕ್ಷಣ ಇಲಾಖೆಯಿಂದ ‘5, 8, 9ನೇ ತರಗತಿ ವಿದ್ಯಾರ್ಥಿ’ಗಳು ಮುಂದಿನ ತರಗತಿ ದಾಖಲಾತಿ ಕುರಿತು ಮಹತ್ವದ ಆದೇಶ
BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ