Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

29/06/2025 10:39 AM

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ಹೊರಗುತ್ತಿಗೆ ನೇಮಕಾತಿ’ಯಲ್ಲಿ ‘ಮೀಸಲಾತಿ ನೀತಿ’ ಅಳವಡಿಸಿ ಅಧಿಕೃತ ಆದೇಶ
KARNATAKA

BREAKING: ರಾಜ್ಯ ಸರ್ಕಾರದಿಂದ ‘ಹೊರಗುತ್ತಿಗೆ ನೇಮಕಾತಿ’ಯಲ್ಲಿ ‘ಮೀಸಲಾತಿ ನೀತಿ’ ಅಳವಡಿಸಿ ಅಧಿಕೃತ ಆದೇಶ

By kannadanewsnow0920/05/2024 6:53 PM

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಇಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದಿದ್ದಾರೆ.

ದಿನಾಂಕ: 21.12.2023 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
2. ಪುತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.

4. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು, ಜಾತಿ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು, ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪಮಾಣ ಪತ್ರದ ಅಗತ್ಯವಿರುವುದಿಲ್ಲ)
5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪುವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.

ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ವಾಯತ್ತ ಸಂಸ್ಥೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬೆಂಕಿ ಹಚ್ಚಿದ ಇಬ್ಬರು ಸಹೋದರರಿಗೆ ಮರಣದಂಡನೆ

‘ಸ್ಮೋಕ್ ಪಾನ್’ ಪ್ರಿಯರೇ ಎಚ್ಚರ ; ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ, ಶಸ್ತ್ರಚಿಕಿತ್ಸ

Share. Facebook Twitter LinkedIn WhatsApp Email

Related Posts

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

29/06/2025 10:39 AM1 Min Read

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM2 Mins Read

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM1 Min Read
Recent News

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

29/06/2025 10:39 AM

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM

GOOD NEWS : `ವಸತಿ ರಹಿತರಿಗೆ’ ಭರ್ಜರಿ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಆವಾಸ್’ ಯೋಜನೆಯಡಿ’ 2.35 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ.!

29/06/2025 10:26 AM
State News
KARNATAKA

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

By kannadanewsnow0529/06/2025 10:39 AM KARNATAKA 1 Min Read

ಹಾವೇರಿ : ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ಆಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳಿಂದ ಹಲವು ಬದಲಾವಣೆಗಳಾಗುತ್ತಿರುವುದು…

BREAKING : ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಹತ್ಯೆ ಕೇಸ್ : ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

29/06/2025 10:33 AM

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM

SHOCKING : ‘ಹೃದಯಾಘಾತಕ್ಕೆ’ ನಗರ ಪ್ರದೇಶದ ಮಹಿಳೆಯರೇ ಹೆಚ್ಚು ಬಲಿ : ತಜ್ಞರಿಂದ ಹೊರಬಿತ್ತು ಶಾಕಿಂಗ್ ವರದಿ!

29/06/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.