ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ್ದು, ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ. ಅಲ್ಲದೆ ಇತ್ತೀಚಿಗೆ ಅಪಾರವಾದಂತಹ ಮಳೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಸಿಟಿ ರೌಂಡ್ಸ್ ಹಾಕಿದರು.
ಸಿಲಿಕಾನ್ ಸಿಟಿಯಲ್ಲಿ ಮಳೆ ಹಾನಿ ಪ್ರದೇಶಗಳಿಗೂ ಭೇಟಿ ನೀಡಿದ ಅವರು, ಜೊತೆಗೆ ಕೆ.ಆರ್ ಪುರ ಸಮೀಪದ ಎನ್ಜಿಎಫ್ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ ಅದೆಲ್ಲಾ ಆಗಿದೆ ಎಂದರು.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿಲ್ಲ, ಆದರೆ ನೀರು ನಿಂತಿದೆ. ಪ್ರೈವೇಟ್ ಲೇಔಟ್ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ, ಸರಿಪಡಿಸುತ್ತೇವೆ. ನಿವಾಸಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ತೇವೆ. ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.