ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿ ತಲೆದಂಡವಾಗಿದೆ. ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ ದಕ್ಷಿಣ ಉಪ ವಿಭಾಗದ ಎಸಿಪಿಯನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದೆ.
ಇಂದು ಹುಬ್ಬಳ್ಳಿಯ ಅಂಜಲಿ ಅಂಬಿಗೇರ ನಿವಾಸಕ್ಕೆ ಗೃಹ ಸಚಿವರ ಡಾ.ಜಿ ಪರಮೇಶ್ವರ್ ಭೇಟಿ ನೀಡಿದ್ದರು. ಅಂಜಲಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಅಂಜಲಿ ಹತ್ಯೆ ಪ್ರಕರಣದ ತನಿಖೆಯ ಮಾಹಿತಿಯನ್ನು ಪಡೆದಿದ್ದರು.
ಈ ಬೆನ್ನಲ್ಲೇ ಹುಬ್ಬಳ್ಳಿಯ ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ ಅವರನ್ನು ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಎಸಿಪಿ ವಿಜಯ್ ಕುಮಾರ್ ತಳವಾರ ಅವರು ಅಮಾತುಗೊಳಿಸಿದ ಬೆನ್ನಲ್ಲೇ, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕ ಕುಶಾಲ್ ಚೌಕ್ಸೆ (ಕೆಎನ್-2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿ ವಹಿಸಿ ಆದೇಶಿಸಿದೆ.
BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ
BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ