ಕಲಬುರ್ಗಿ : ಸಂಶೋಧನಾ ವಿದ್ಯಾರ್ಥಿಯು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಹೊರವಲಯದಲ್ಲಿರುವ ಕಡಗಂಚಿ ವಿಶ್ವವಿದ್ಯಾಲಯದ ಹತ್ತಿರ ಇರುವ ಪೆಟ್ರೋಲ್ ಬಂಕ್ ಬಳಿ ಈ ಸಂಶೋಧನಾ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಆನಂದ್ (42) ಎಂದು ಹೇಳಲಾಗುತ್ತಿದ್ದು, ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು ಎಂದು ತಿಳಿದುಬಂದಿದೆ.ವಿಶ್ವವಿದ್ಯಾಲಯದ ಪೆಟ್ರೋಲ್ ಪಂಪ್ ಬಳಿ ಅವರ ಶವ ಪತ್ತೆಯಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅವರು ಕನ್ನಡ ವಿಷಯದಲ್ಲಿ ಪಿಹೆಚ್‍ಡಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ನರೋಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.