ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಂಧನದ ವಾರೆಂಟ್ ಜಾರಿಗೊಳಿಸಿದ ಬೆನ್ನಲ್ಲೇ ಇದೀಗ ಪಾಸ್ ಪೋರ್ಟ್ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಎಸ್ ಐಟಿ ಪತ್ರ ಬರೆದಿದೆ.
ವಿದೇಶದಲ್ಲಿ ಅಜ್ಞಾತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ಎಸ್ ಐಟಿ ಪತ್ರ ಬರೆದಿದೆ.
ಲೈಂಗಿಕ ಹಗರಣ ಬೆಳಿಕಗೆ ಬಂದ ನಂತರ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿಕೊಂಡು ಏಪ್ರಿಲ್ 26 ರಂದು ಜಮರ್ನಿಯ ಮ್ಯೂನಿಕ್ ನಗರಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಅಂದಿನಿಂದ ಬಹಿರಂತವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಪ್ರಸ್ತುತ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಪಾಸ್ ಪೋರ್ಟ್ ರದ್ದತಿಗೆ ಎಸ್ ಐಟಿ ಮುಂದಾಗಿದ್ದು, ಈ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದೆ.