ಬೆಂಗಳೂರು: ಭಾರತ ಚುನಾವಣಾ ಆಯೋಗದ 2023ನೇ ಆಗಸ್ಟ್ 09, ವೇಳಾಪಟ್ಟಿಯ ಅನುಸಾರ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು 2023ನೇ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿರುತ್ತದೆ.
ಪ್ರಸ್ತುತ ಭಾರತ ಚುನಾವಣಾ ಆಯೋಗದ 2024ನೇ ಮೇ 2ರ ಪ್ರಕಟಣೆಯಂತೆ ಬೆಂಗಳೂರು ಪದವಿಧರರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ 2024ನೇ ಮೇ 16ಕ್ಕೆ ಅಂತಿಮಗೊಳಿಸಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.