ನವದೆಹಲಿ : ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ.31 ರವರೆಗೆ ವಿಸ್ತರಿಸಿ ದೆಹಲಿಯ ರೂಸ್ ಅವೆನ್ನೂ ನ್ಯಾಯಾಲಯ ಆದೇಶ ಹೊರಡಿಸಿದೆ.
ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಹ ಬಂಧಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ.
ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಬಗ್ಗೆ ದೆಹಲಿ ಹೈಕೋರ್ಟ್ ತನ್ನ ತೀರ್ಪನ್ನು ನೀಡುವ ನಿರೀಕ್ಷೆಯಿದೆ.