ಹಾಸನ : ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು, ಕಂಟೈನರ್ ನಡುವೆ ಡಿಕ್ಕಿಯಾಗಿ ತಾಯಿ,ಮಗ ಸಾವನ್ನಪ್ಪಿರುವ ಘಟನ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಂಪುಹೊಳೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು, ಕಂಟೈನರ್ ನಡುವೆ ಡಿಕ್ಕಿಯಾಗಿ ಪುತ್ರ ಶಫೀಕ್ ಹಾಗೂ ತಾಯಿ ಸಫಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.