ಬೆಂಗಳೂರು : ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನನ್ನ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಾವರು, ನನ್ನ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿರುವುದು ಮುಖ್ಯವಲ್ಲ ಎಂದು ಹೇಳಿದ್ದಾರೆ.
ಈ ನಡುವೆ ಪೆನ್ ಡ್ರೈವ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳವಂತೆ ಡಿಕೆ ಶಿವಕುಮಾರ್ ಅವರಿಗೆ ಒಕ್ಕಲಿಗ ನಾಯಕರು ಸಲಹೆ ನೀಡಿದ್ದಾರೆ. ಪೆನ್ಡ್ರೈವ್ ಕೇಸ್ನಲ್ಲಿ ಮಾತನಾಡದಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.