ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.