ಹುಬ್ಬಳ್ಳಿ : ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಕೊಲೆಯಾಗಿತ್ತು.ಈ ಘಟನೆ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಮಹಿಳೆಯೊಂದಿಗೆ ಕಾನ್ಸ್ಟೇಬಲ್ ಮಹೇಶ್ ಹೆಸರೂರು ಎಂಬ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮಹೇಶ್ ಹೆಸರೂರು ಎಂದು ತಿಳಿದುಬಂದಿದೆ.
ಎರಡು ಮೂರು ದಿನದ ಹಿಂದೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಕೂಡಲೇ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದಂತಹ ಪೊಲೀಸರು ಬಾಗಿಲು ಒಡೆದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಮಾಹಿತಿಯನ್ನು ಇದೀಗ ಪೊಲೀಸರು ಕಲೆ ಹಾಕುತ್ತಿದ್ದಾರೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.