ಧಾರವಾಡ: ನಗರದಲ್ಲಿ ಒಂದೇ ಸೀರೆಯಲ್ಲಿ ಮಹಿಳೆ ಹಾಗೂ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಧಾರವಾಡದ ನವನಗರದಲ್ಲಿರುವಂತ ಮನೆಯೊಂದರಲ್ಲಿ ಮಹಿಳೆ ಹಾಗೂ ಧಾರವಡಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಮಹೇಶ್ ಎಂಬುವರು ಸೀರೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2-3 ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮನೆಯಲ್ಲಿ ದುರ್ವಾಸನೆ ಬಂದ ಕಾರಣ ಪೊಲೀಸರಿಗೆ ಅಕ್ಕಪಕ್ಕದ ನಿವಾಸಿಗಳು ಮಾಹಿತಿ ನೀಡಿದ್ದರು.
ಹುಬ್ಬಳ್ಳಿಯ ನವನಗರದ ಠಾಣೆಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿದಾಗ ಧಾರವಾಡದ ಸಂಚಾರ ಪೊಲೀಸ್ ಠಾಣೆಯ ಪೇದೆ ಮಹೇಶ್ ಹಾಗೂ ಮಹಿಳೆ ಒಂದೇ ಸೀರೆಯಲ್ಲಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಹುಬ್ಬಳ್ಳಿಯ ನವನಗರ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್
‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ