ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್, ಬಿಗ್ಬಾಸ್ ಮನೆಯಿಂದ ಹೊರಬಂದ ಮೇಲೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಪ್ರತಾಪ್ ತಮ್ಮ ಹುಟ್ಟುಹಬ್ಬದಂದು ಒಳ್ಳೆಯ ಕಾರ್ಯ ಮಾಡಲು ಮುಂದಾಗಿದ್ದಾರೆ.
ಹೌದು ಬಿಗ್ ಬಾಸ್ ಮನೆಯಿಂದ ಹೊರಬಂದ ತಕ್ಷಣ ಡ್ರೋನ್ ಪ್ರತಾಪ್ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಇದೀಗ ಜೂನ್ 11ರಂದು ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಈ ಒಂದು ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ.ಡ್ರೋನ್ ಪ್ರತಾಪ್, ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು, ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿದ್ದಾರೆ.
ಡಾ ರಾಜ್ಕುಮಾರ್ ಅವರು ನೇತ್ರದಾನ ಮಹಾದಾನ ಎಂದಿದ್ದಾರೆ. ಜುಲೈ 11 ಕ್ಕೆ ನನ್ನ ಹುಟ್ಟುಹಬ್ಬವಿದೆ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿಕೊಳ್ಳಬೇಕು ಎಂದು ನಾನು ನಿರ್ಧರಿಸಿದ್ದೇನೆ.
ಯಾರಾದರೂ ಐದು ಮಂದಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ನಾನು ತೀರ್ಮಾನ ಮಾಡಿದ್ದೀನಿ. ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ ಎಂದಿದ್ದಾರೆ ಡ್ರೋನ್ ಪ್ರತಾಪ್.
ಇವರ ಒಂದು ಈ ವಿಡಿಯೋಗೆ ಇನ್ಸ್ಟಾಗ್ರಾಮ್ ನಲ್ಲಿ ಸಾಕಷ್ಟು ಪ್ರತಿಕ್ರಿಯೆ ಬಂದಿದ್ದು ಕೆಲವರು ಇವರ ಒಂದು ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನೂ ಕೆಲವರು ನಿಮ್ಮ ಈ ಒಂದು ಕಾರ್ಯಕ್ಕೆ ನಾವು ಬೆಂಬಲವಾಗಿ ನಿಂತುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ನು ಕೆಲವರು ಅಗತ್ಯತೆ ಇರುವಂತಹ ಹಲವರ ನಂಬರ್ ಗಳನ್ನು ಕಮೆಂಟ್ ಬಾಕ್ಸ್ ನಲ್ಲಿ ತಿಳಿಸಿದ್ದಾರೆ.