ಹುಬ್ಬಳ್ಳಿ : ಗ್ಯಾರಂಟಿ ಜಾರಿ ಬಳಿಕ ಸಚಿವರು ಶಾಸಕರಿಗೆ ಉತ್ಪನ್ನ ಕಡಿಮೆಯಾಗಿದೆ. ಪೊಲೀಸ್ ಅಧಿಕಾರಿಗಳಿಂದ ಕೋಟಿ ಕೋಟಿ ಹಣ ವಸೂಲಿ ಮಾಡುತ್ತಾರೆ. ಇದರಿಂದ ಗಾಂಜಾ ಅಫೀಮು ಅವ್ಯಾಹತವಾಗಿ ಮಾರಾಟವಾಗುತ್ತಿವೆ. ಎಂದು ಶಾಸಕ ಬಸನಗೌಡ ಪಾಟೀಲ ಗಂಭೀರವಾದ ಆರೋಪ ಮಾಡಿದರು.
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗರ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸರ್ಕಾರವಿದ್ದಾಗ ಎನ್ಕೌಂಟರ್ ಆಗಿದ್ರೆ ಈ ರೀತಿ ಕೃತ್ಯ ಆಗುತ್ತಿರಲಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧವೇ ಶಾಸಕ ಯತ್ನಾಳ್ ಇದೀಗ ಅಸಮಾಧಾನ ಹೊರಹಾಕಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಮಾಡಿದ ತಪ್ಪಿನಿಂದಾಗಿ ಜನರು ಬುದ್ಧಿ ಕಲಿಸಿದ್ದಾರೆ. ಬಿಜೆಪಿಗೂ ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಕೆಜಿ ಹಳ್ಳಿ ಗಲಬೆ ನಡೆದಾಗ ನಿರ್ಧಾರ ಕೈಗೊಂಡಿದ್ದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗುತ್ತಿರಲಿಲ್ಲ ಎಂದು ಅವರು ಸ್ವಪಕ್ಷದ ವಿರುದ್ಧವೆ ಅಸಮಾಧಾನ ಹೊರ ಹಾಕಿದ್ದಾರೆ.