ಬೆಂಗಳೂರು : ಮೊಬೈಲ್ ನಿಂದ ಐದು ವರ್ಷದ ಮಗುವಿನಿಂದ ಯಡಿಯೂರು ಪ್ರತಿಯೊಬ್ಬರೂ ಹಾಳಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ ಅಣ್ಣ ತಂಗಿ ಪರಸ್ಪರ ಲೈಂಗಿಕ ಕ್ರಿಯೆ ನಡೆಸಿದ ಪರಿಣಾಮ ತಂಗಿ ಮೂರು ತಿಂಗಳ ಗರ್ಭಿಣಿ ಆಗಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, 14 ವರ್ಷದ ಅವಳಿ ಜವಳಿ ಮಕ್ಕಳಾಗಿದ್ದ ಅಣ್ಣ ಹಾಗೂ ತಂಗಿ. ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.
ಬಳಿಕ ಅಪ್ರಾಪ್ತ ವಯಸ್ಸಿನ ಅಣ್ಣ ತಂಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ.ಬಳಿಕ ಅಪ್ರಾಪ್ತ ಬಾಲಕಿ ಹೊಟ್ಟೆ ನೋವೆಂದು ಎಂದಾಗ ತಕ್ಷಣ ಆಕೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಪರೀಕ್ಷೆ ನಡೆಸಿದಾಗ ಮೂರು ತಿಂಗಳು ಗರ್ಭಿಣಿಯಾಗಿದ್ದು ದೃಢಪಟ್ಟಿದೆ. ತಕ್ಷಣ ಖಾಸಗಿ ಆಸ್ಪತ್ರೆಯ ವೈದರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.ನಂತರ ಬಾಲಕನನ್ನು ಬಾಲಾ ಅಪರಾಧಿ ಕೇಂದ್ರಕ್ಕೆ ಕಳುಹಿಸಿದ್ದಾರೆ.ಸಂತ್ರಸ್ತ ಬಾಲಕಿ ಖಾಸಗಿ ಆಸ್ಪತ್ರೆಯಿಂದ ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.