ಬೆಂಗಳೂರು : ಇಂದು ರಾಜ್ಯದಲ್ಲಿ ಅನೇಕ ದುರ್ಘಟನೆಗಳು ಸಂಭವಿಸಿದ್ದು ಮಕ್ಕಳು ಮಹಿಳೆಯರು ಸೇರಿದಂತೆ 8 ಜನರು ಸಾವನಪ್ಪಿರುವ ಘಟನೆಗಳು ರಾಜ್ಯದ ವಿವಿಧಡೆ ನಡೆದಿವೆ. ಬೆಂಗಳೂರು ಬೆಳಗಾವಿ ವಿಜಯಪುರ ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದುರಂತ ಸಂಭವಿಸಿ ಪ್ರಾಣ ಕಳೆದುಕೊಂಡಿದ್ದಾರೆ.
ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರ ಸಾವು
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನಪ್ಪಿದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಇನ್ನಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಹಾಗೂ ಶೋಭಾ ತೇಲಿ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೂಡ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ರಾಠೋಡ್ (12) ಸುದೀಪ ರಾಠೋಡ್ (10) ಸಾವನ್ನುಪ್ಪಿರುವ ಮೃತ ಬಾಲಕರು. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ನೀರಿನ ಸಂಪ್ ಗೆ ಬಿದ್ದು 5 ವರ್ಷದ ಮಗು ಸಾವು
ಇತ್ತೀಚಿಗೆ ತಂದೆಯ ಜೊತೆ ಕಾರ್ ತೊಳೆಯುತ್ತಿದ್ದಾಗ ಎಕ್ಸೆಲೆಟರ್ ತುಳಿದು, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು ನೀರಿನ ಸಂಪ್ ನಲ್ಲಿ ಐದು ವರ್ಷದ ಮಗು ಬಿದ್ದು ಸಾವನಪ್ಪಿರುವ ಘಟನೆ ಇದೀಗ ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಸಂಪಿಗೆ ಬಿದ್ದು 5 ವರ್ಷದ ಮಗು ಸಾವನನಪ್ಪಿರುವ ಘಟನೆ ನಡೆದಿದೆ. ನೇಪಾಳ ಮೂಲದ ದಂಪತಿಯ ಪುತ್ರ ಸಬೀನ್ (5) ಸಾವನ್ನಪ್ಪಿರುವ ಮಗು ಎಂದು ತಿಳಿಬಂದಿದೆ. ಬೆಂಗಳೂರಿನಲ್ಲಿ ನೇಪಾಳ ಮೂಲದ ದಂಪತಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣು
ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಕೊಲೆಯಾಗಿತ್ತು.ಈ ಘಟನೆ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಮಹಿಳೆಯೊಂದಿಗೆ ಕಾನ್ಸ್ಟೇಬಲ್ ಮಹೇಶ್ ಹೆಸರೂರು ಎಂಬ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮಹೇಶ್ ಹೆಸರೂರು ಎಂದು ತಿಳಿದುಬಂದಿದೆ.
ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು
ಇಂದು ರಾಜ್ಯದಲ್ಲಿ ದುರಂತಗಳ ಸರಮಾಲೆಯ ನಡೆದಿದೆ. ಈಗ ಚಿಕ್ಕಮಂಗಳೂರಿನಲ್ಲಿ ಒಂದು ಅನಾಹುತ ನಡೆದಿದ್ದು ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗಾಂಜಾಲಗೋಡು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.ನಿನ್ನೆ ಸುರಿದ ಗಾಳಿ ಮಳೆಯಿಂದ ವೈರು ಒಂದು ನೇತಾಡುತ್ತಿತ್ತು.ಈ ವಳೆ ಯುವಕ ಲೈನ್ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.