ಹುಬ್ಬಳ್ಳಿ : ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ಪಡೆದು ವಿಚಾರಣ ನಡೆಸಿದೆ.
ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಂತ ಶೋಯೇಬ್ ಅಬ್ದುಲ್ ಮಿರ್ಜಾ ಎಂಬಾತನ ನಿವಾಸದ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳಿಕ ಎನ್ ಐಎ ಅಧಿಕಾರಿಗಳು ಶೋಯೇಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಹುಬ್ಬಳ್ಳಿಯ ಇಂದಿರಾನಗರದ ಎನ್ ಐಎ ಕಚೇರಿಯಲ್ಲಿ ಇಬ್ಬರು ಸಹೋದರರನ್ನು ತೀವ್ರ ವಿಚಾರಣೆ ನಡೆಸಿರುವ ಎನ್ ಐಎ ಅಧಿಕಾರಿಗಳು, ವಿದೇಶಿ ಹ್ಯಾಂಡ್ಲರ್ ಗಳ ಜೊತೆಗೆ ಲಿಂಕ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಬ್ದುಲ್ ಮತೀನ್ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಂದಾಯ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಬಳಿಕ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಹಣ ಪಡೆದು ಬಾಂಬರ್ ಪಶ್ಚಿಮ ಬಂಗಾಳಕ್ಕೆ ತೆರಳಿರುವ ಸಾಧ್ಯತೆ ಇದೆ.