ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ.
ಇಂದು ಸಂಸದ ಡಿ.ಕೆ. ಸುರೇಶ್ ನಿವಾಸದಲ್ಲಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಊಟಕ್ಕೆ ಆಹ್ವಾನಿಸಿದ್ದಾರೆ. ಈ ವೇಳೆ ಮಹತ್ವದ ರಾಜಕೀಯ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ರಾಜಕೀಯದಲ್ಲಿ ಸದ್ಯ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್, ಲೋಕಸಭೆ ಚುನಾವಣೆ ಕುರಿತು ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.